ಮೂಡಬಿದ್ರೆ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!!


ಮಂಗಳೂರು: ಮೂಡಬಿದ್ರೆಯ ಪ್ರಸಿದ್ಧ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ವಿದ್ಯಾರ್ಥಿ ತಾನು ಉಳಿದುಕೊಂಡಿದ್ದ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಸಂಜೆ ನಡೆದಿದೆ. ಮೃತನನ್ನು ಗದಗ ಮೂಲದ ಬಸವರಾಜ್(16) ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ವಿದ್ಯಾರ್ಥಿಯ ಮನೆಮಂದಿಗೆ ಮಾಹಿತಿ ನೀಡಲಾಗಿದೆ. ಅವರು ಬಂದ ಬಳಿಕ ಪ್ರಕರಣದ ಹೆಚ್ಚಿನ ಮಾಹಿತಿ ಹೊರಬೀಳಲಿದೆ. ಸ್ಥಳಕ್ಕೆ ಮೂಡಬಿದ್ರೆ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆಯನ್ನು ನಡೆಸಿದ್ದಾರೆ.

One thought on “ಮೂಡಬಿದ್ರೆ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!!

Leave a Reply

Your email address will not be published. Required fields are marked *

error: Content is protected !!