ಡೆಂಗ್ಯೂ ಜ್ವರಕ್ಕೆ ಬಲಿಯಾದವರ ಸಂಖ್ಯೆ 11ಕ್ಕೇರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮಳೆ ಬಿಟ್ಟುಬಿಟ್ಟು ಬರುತ್ತಿರುವ ಕಾರಣ ಸೊಳ್ಳೆ ಸಂತಾನಾಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗಿದ್ದು ಡೆಂಗ್ಯೂ ಜ್ವರ ಹೆಚ್ಚಲು ಕಾರಣವಾಗಿದೆ.
ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ.ನವೀನ್‍ಚಂದ್ರ ಅವರು, ಶಂಕಿತ ಡೆಂಗ್ಯೂವಿನಿಂದ ಈಗಾಗಲೇ 11 ಮಂದಿ ಮೃತಪಟ್ಟಿದ್ದಾರೆ. ಇವರ ಪೈಕಿ 6 ಮಂದಿಯ ರಕ್ತವನ್ನು ಎಲಿಸಾ ಪರೀಕ್ಷೆಗೆ ಕಳುಹಿಸಲಾಗಿದೆ. ಉಳಿದವರ ರಕ್ತವನ್ನೂ ಪರೀಕ್ಷೆಗೆ ಕಳುಹಿಸಲಾಗುವುದು. ಪ್ರಾಥಮಿಕ ಪರೀಕ್ಷೆಯಲ್ಲಿ ಡೆಂಗ್ಯೂ ಪಾಸಿಟಿವ್ ಎಂಬ ವರದಿ ಬಂದಿರಬಹುದು, ಆದರೆ ಅದೆಲ್ಲವೂ ಡೆಂಗ್ಯೂ ಎಂದು ದೃಢಪಡಿಸಲಾಗದು ಎಂದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಡೆಂಗ್ಯೂ 152 ಮತ್ತು ಮಲೇರಿಯಾ ಪ್ರಕರಣ 63ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕ್ ತಿಳಿಸಿದ್ದಾರೆ. ಪ್ರತಿದಿನ 50ರಿಂದ 70 ಮಂದಿ ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ.
error: Content is protected !!