ಆ.29: ಮಂಗಳೂರಿಗೆ ದಲಾಯಿಲಾಮ

ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಆಗಸ್ಟ್ 29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.20ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮರುದಿನ ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ದಲಾಯಿಲಾಮ ಭಾಗವಹಿಸಲಿದ್ದಾರೆ. ಆ.31ರ ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ.
error: Content is protected !!